ಡಿಕೆಶಿ ಬಂಧನ: ಮಂಗಳೂರಿನ ವಿವಿಧೆಡೆ ಬಸ್ ಗಳ ಮೇಲೆ ಕಲ್ಲು ತೂರಾಟ
ಮಂಗಳೂರು: ಪ್ರಭಾವಿ ರಾಜಕಾರಣಿ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಫಳ್ನೀರ್ ಮತ್ತು ನಂದಿಗುಡ್ಡೆಯಲ್ಲಿ ಸಂಚರಿಸುತ್ತಿದ್ದ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಂಕನಾಡಿ ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಗೆ ತೆರಳುತ್ತಿದ್ದ ನಂ.6 ಖಾಸಗಿ ಬಸ್ ಮೇಲೂ ಕಲ್ಲು ತೂರಾಟ ನಡೆದಿದೆ.
ಫಳ್ನೀರ್ ನಲ್ಲಿ ನಡೆದ ಕಲ್ಲು ತೂರಾಟದಲ್ಲಿ ಬಸ್ ನ ಗಾಜು ಸಂಪೂರ್ಣ ಪುಡಿಗಟ್ಟಿದೆ.
ಕದ್ರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.
Next Story