ಮಲ್ಪೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಮಲ್ಪೆ, ಸೆ.5: ವ್ಯವಹಾರದಲ್ಲಿ ನಷ್ಟ ಉಂಟಾಗಿ ಆರ್ಥಿಕ ಸಂಕಷ್ಟ ಸಿಲುಕಿದ ವ್ಯಕ್ತಿಯೊಬ್ಬರು ತಾನಿದ್ದ ಬಾಡಿಗೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ನೆರ್ಗಿಯ ಸರಸ್ವತಿ ಭಜನಾ ಮಂದಿರದ ಬಳಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ದಿನೇಶ್ ಕೆ.ಬಂಗೇರ (48) ಎಂದು ಗುರುತಿಸಲಾಗಿದೆ. ಇವರು ಇಂದು ಬೆಳಗ್ಗೆ 9ರಿಂದ 9:15ರ ನಡುವಿನ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story