ಮಂಗಳೂರು: ನೂತನ ಮೋಟಾರು ವಾಹನ ಕಾಯ್ದೆ ಸೆ.7ರಿಂದ ಜಾರಿ ಸಾಧ್ಯತೆ
ಮಂಗಳೂರು, ಸೆ.6: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಮೊತ್ತವನ್ನು ಹೆಚ್ಚಿಸಿ ಜಾರಿ ಮಾಡಿರುವ ಹೊಸ ಮೋಟಾರು ವಾಹನ ಕಾಯ್ದೆ ಮಂಗಳೂರು ನಗರದಲ್ಲಿ ಶನಿವಾರದಿಂದ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.
ಪರಿಷ್ಕೃತ ದಂಡ ಶುಲ್ಕದ ಬಗ್ಗೆ ಸಾಫ್ಟ್ ವೇರ್ನಲ್ಲಿ ಅಪ್ಡೇಟ್ ಮಾಡುವ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಬೆಂಗಳೂರಿನಿಂದ ತಜ್ಞರು ಬಂದು ಈ ಕೆಲಸವನ್ನು ನಡೆಸಿದ್ದಾರೆ ಎಂದು ಟ್ರಾಫಿಕ್ ಪೊಲೀಸ್ ಮೂಲಗಳು ತಿಳಿಸಿವೆ.
ಹೊಸ ನಿಯಮಗಳನ್ನು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಇದರ ಜತೆಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Next Story