ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಉದ್ಘಾಟನೆ
ಕೊಣಾಜೆ: ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಶನಿವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಣಚೂರು ಅಕಾಡೆಮಿ ಆಫ್ ಜನರಲ್ ಎಜುಕೇಶನ್ ನ ಸಲಹಾ ಮಂಡಳಿಯ ಅಧ್ಯಕ್ಷ ಪ್ರೊ. ಎಂ. ಅಬ್ದುಲ್ ರಹಿಮಾನ್ಮ ತ್ತು ಆಡಳಿತ ಮಂಡಳಿಯ ಸಂಚಾಲಕರಾದ ಅಬ್ದುಲ್ ರಹ್ಮಾನ್ ಉದ್ಘಾಟಿಸಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸಮೀನ ಮುಖ್ಯ ಅತಿಥಿಗಳಿಗೆ ಹಾಗೂ ಸಭೆಯ ಅಧ್ಯಕ್ಷರಿಗೆ ಸಸಿಯನ್ನು ಹಸ್ತಾಂತರಿಸುವ ಮೂಲಕ ಸಂಘದ ಕಾರ್ಯ ಚಟುವಟಿಕೆಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಹೇಮಲತ, ಕಣಚೂರು ಮ್ಯಾನೇಜ್ ಮೆಂಟ್ ಆಂಡ್ ಸ್ಯೆನ್ಸ್ ನ ಪ್ರಾಂಶುಪಾಲರಾದ ಇಕ್ಬಾಲ್ ಅಹಮದ್ ಯು.ಟಿ, ಕಣಚೂರು ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲರಾದ ವಿನೀತ ಗಾಮ ರೋಸ್ ಮಥಾಯಸ್, ಆನಂದಿ ಹಾಗೂ ಪ್ರಾಥಮಿಕ ಶಾಲೆಯ ಪ್ರಾಂಶುಪಾಲೆ ಲಿನೆಟ್ ಡಿಸೋಜ ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಅಮಾನ ಕಾರ್ಯಕ್ರಮವನ್ನು ಸ್ವಾಗತಿಸಿ, ಅಫ್ರೀನ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಸನಾ ಪರ್ವೀನಾ ವಂದಿಸಿದರು.