ವಯೋಶ್ರೇಷ್ಠ ಸಮ್ಮಾನ್ ಪ್ರಶಸ್ತಿ: ಅರ್ಜಿ ಆಹ್ವಾನ
ಮಂಗಳೂರು, ಸೆ.12: ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ 2019ನೇ ಸಾಲಿನ 'ವಯೋಶ್ರೇಷ್ಠ ಸಮ್ಮಾನ್ 2019' ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಸಂಘ ಸಂಸ್ಥೆಗಳು ಹಾಗೂ ನಾಗರಿಕರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆ.17 ಕೊನೆಯ ದಿನವಾಗಿದೆ. ಅರ್ಜಿಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಪಂ ಕಟ್ಟಡ, ಉರ್ವಸ್ಟೋರ್, ಮಂಗಳೂರು ಕಚೇರಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824-2458173, 2455999 ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story