ರಾಜ್ಯ ಮಟ್ಟದ ಕರಾಟೆ: ವಿಟ್ಲದ ದಕ್ಷಾಗೆ ಚಿನ್ನ-ಬೆಳ್ಳಿ
ಬಂಟ್ವಾಳ, ಸೆ. 12: ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಷಲ್ ಆಟ್ರ್ಸ್ ಇದರ ವತಿಯಿಂದ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲದ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 3ನೇ ತರಗತಿಯ ದಕ್ಷಾ ವಿ. ಜೋಗಿ ಕುಮಿಟೆ ವಿಭಾಗದಲ್ಲಿ ಚಿನ್ನ ಮತ್ತು ಕುಮಿಟೆ ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.
Next Story