ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ
ಮಂಗಳೂರು, ಸೆ.16: ನಗರದ ಸ್ಟೇಟ್ಬ್ಯಾಂಕ್ನ ನೆಲ್ಲಿಕಾಯಿ ರಸ್ತೆಯ ಕಟ್ಟಡವೊಂದರ ಸಮೀಪ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಾವುದೋ ಕಾರಣದಿಂದ ಮೃತಪಟ್ಟಿರಬಹುದೆಂದು ಶಂಕೆ ವ್ಯಕ್ತಪಡಿಸಲಾಗಿದೆ.
ನೆಲ್ಲಿಕಾಯಿ ರಸ್ತೆಯ ಖಾಸಗಿ ಕಟ್ಟಡವೊಂದರ ಮೇಲಂತಸ್ತಿಗೆ ತೆರಳುವ ಮೆಟ್ಟಿಲುಗಳಿಗೆ ಅಳವಡಿಸಿದ ಸ್ಟೀಲ್ ಗ್ರೀಲ್ಸ್ಗೆ ಬಿಳಿಬಣ್ಣದ ಬಟ್ಟೆಯಿಂದ ವ್ಯಕ್ತಿಯು ನೇಣುಬಿಗಿದುಕೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ವ್ಯಕ್ತಿಯನ್ನು ಆ್ಯಂಬುಲೆನ್ಸ್ ಮೂಲಕ ಕರೆದೊಯ್ದು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ಘೋಷಿಸಿದರು.
ಚಹರೆ: 5.2 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ಹಳದಿ ಬಿಳಿ ಕಡು ನೀಲಿ ಬಣ್ಣದ ಚೌಕುಳಿ ಗೆರೆಗಳಿರುವ ಉದ್ದ ತೋಳಿನ ಅಂಗಿ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ.
ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆ (0824- 2220518) ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.