ಗಾಂಜಾ ಮಾರಾಟಕ್ಕೆ ಯತ್ನ: ಸೊತ್ತು ಸಹಿತ ಮೂವರ ಬಂಧನ
ಮಂಗಳೂರು, ಸೆ.16: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿದ ಮಂಗಳೂರು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂದರ್ ನಿವಾಸಿ ಫಾರೂಕ್ (51), ಕಾಸರಗೋಡು ಮಂಜೇಶ್ವರ ನಿವಾಸಿಗಳಾದ ಆಬಿದ್ (19), ಜುಬೈರ್ (22) ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಐದು ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಫಾರೂಕ್ ಮೇಲೆ ಮಂಗಳೂರು ಉತ್ತರ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ, ಮಂಗಳೂರು ಎನ್ಸಿಪಿಎಸ್ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ, ಕಾಸರಗೋಡು ಜಿಲ್ಲೆಯ ಕುಂಬಳೆ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಂಕನಾಡಿ ನಗರ ಠಾಣೆ ಹಾಗೂ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story