ಕುಕ್ಕಿಪಾಡಿ: ಗ್ರಾಪಂ ಮಾಜಿ ಸದಸ್ಯ ಸಂಜೀವ ಕರ್ಕೇರ ನಿಧನ
ಬಂಟ್ವಾಳ : ತಾಲೂಕಿನ ಎಲಿಯನಡುಗೋಡು ಗ್ರಾಮದ ಉಪ್ಪಿರ ನಿವಾಸಿ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಸಂಜೀವ ಕರ್ಕೇರ (56) ಇವರು ಅಸೌಖ್ಯದಿಂದ ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರು ಅಗಲಿದ್ದಾರೆ.
ಬಿಜೆಪಿ ಕಾರ್ಯಕರ್ತರಾಗಿದ್ದ ಇವರು ಕುಕ್ಕಿಪಾಡಿ ಗ್ರಾಮ ಪಂಚಾಯತ್ ನಲ್ಲಿ ಎರಡನೇ ಅವಧಿಗೆ ಸದಸ್ಯರಾಗಿದ್ದರು. ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮತ್ತಿತರ ಗಣ್ಯರು ಮೃತರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story