ವಿಭಾಗ ಮಟ್ಟದ ದಸರಾ ಕ್ರೀಡಾಕೂಟ
ಉಡುಪಿ, ಸೆ.17: 2019-20ನೇ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಈ ಕೆಳಕಂಡ ಸ್ಥಳಗಳಲ್ಲಿ ನಡೆಯಲಿದೆ.
ಸೆ.21ರಂದು ಮಣಿಪಾಲ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಫುಟ್ಬಾಲ್ ಸ್ಪರ್ಧೆ ನಡೆಯಲಿದೆ. ಸೆ.21 ಮತ್ತು 22ರಂದು ಮಂಡ್ಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜೂಡೋ ಮತ್ತು ಟೇಕ್ವಾಂಡೋ ಸ್ಪರ್ಧೆಗಳಿಗೆ ನೇರ ಆಯ್ಕೆ ಪ್ರಕ್ರಿಯೆ ಜರಗಲಿದೆ.
ಸೆ.22ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಜಿಮ್ನಾಸ್ಟಿಕ್ ಸ್ಪರ್ಧೆಯ ನೇರ ಆಯ್ಕೆ ಪ್ರಕ್ರಿಯೆ ಮತ್ತು ಸೆ.24ರಂದು ಹಾಕಿ ಸ್ಪರ್ಧೆ ನಡೆಯಲಿದೆ. 22ರಂದು ಉಡುಪಿ ಅಜ್ಜರಕಾಡು ಜಿಲ್ಲಾ ಈಜುಕೊಳ ಹಾಗೂ ಒಳಾಂಗಣ ಟೆನ್ನಿಸ್ ಅಂಕಣದಲ್ಲಿ ಈಜು ಮತ್ತು ಟೆನ್ನಿಸ್ ಸ್ಪರ್ಧೆಗಳು ನಡೆಯ ಲಿವೆ. ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ.22ರಂದು ಬಾಕ್ಸಿಂಗ್, ವುಷು, ಪೆನ್ಸಿಂಗ್ ಮತ್ತು ಆರ್ಚರಿ ಸ್ಪರ್ಧೆಗಳ ನೇರ ಆಯ್ಕೆ ಪ್ರಕ್ರಿಯೆಯು ನಡೆಯಲಿದೆ.
ಸೆ.25ರಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿನಕುರಳಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತ್ರೋಬಾಲ್, ಖೋಖೋ, ಕಬಡ್ಡಿ ಮತ್ತು ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆಯಲಿವೆ. ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿ/ತಂಡಗಳು ವಿಬಾಗ ಮಟ್ಟದ ಸ್ಥಳಗಳಲ್ಲಿ ನಿಗದಿತ ದಿನಾಂಕದಂದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಕಚೇರಿ ದೂರವಾಣಿ ಸಂಖ್ಯೆ: 0820- 2521324ನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.