ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ: ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು, ಸೆ.20: ದ.ಕ. ಜಿಲ್ಲಾಡಳಿತದಿಂದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅನುಪಮ ಸೇವೆ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭ 2019ನೇ ಸಾಲಿನ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು, ಸಮಾಜ ಸೇವೆ, ಜಾನಪದ, ಪರಿಸರ- ವಿಜ್ಞಾನ, ವೈದ್ಯಕೀಯ, ಸಂಶೋಧನೆ, ಪತ್ರಿಕೋದ್ಯಮ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರು ಅರ್ಜಿಯನ್ನು ತಮ್ಮ ಸೇವೆ/ಸಾಧನೆಯ ಕ್ಷೇತ್ರ ಹಾಗೂ ಸಂಕ್ಷಿಪ್ತ ದಾಖಲೆ, ವಿವರವನ್ನು ಅಕ್ಟೋಬರ್ 19ರಂದು ಸಂಜೆ 5ಗಂಟೆಯೊಳಗೆ ಜಿಲ್ಲಾಧಿಕಾರಿ ಕಚೇರಿಗೆ ನೀಡುವಂತೆ ಪ್ರಕಟನೆ ತಿಳಿಸಿದೆ.
Next Story