ಕಾಸರಗೋಡು: ಕಾರು ಢಿಕ್ಕಿ; ಬೈಕ್ ಸವಾರ ಮೃತ್ಯು
ಕಾಸರಗೋಡು: ಕಾರು - ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಚೌಕಿ ಕಲ್ಲಂಗೈಯಲ್ಲಿ ಬುಧವಾರ ನಡೆದಿದೆ.
ಪುಳ್ಕೂರ್ ನಿವಾಸಿ ಫಯಾಝ್ (20) ಮೃತರು ಎಂದು ಗುರುತಿಸಲಾಗಿದೆ.
ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ. ಕಾಸರಗೋಡು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story