ಮಿನಿ ಟೆಂಪೋ ಢಿಕ್ಕಿ: ಪಾದಚಾರಿ ಮೃತ್ಯು
ಕೋಟ, ಅ.10: ತೆಕ್ಕಟ್ಟೆ ಗ್ರಾಮದ ರೈಸ್ ಮಿಲ್ ಹತ್ತಿರ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಿನಿ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅ.9ರಂದು ಬೆಳಗ್ಗೆ 11ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಹೆಂಗವಳ್ಳಿ ಗ್ರಾಮದ ಮಟ್ನಗದ್ದೆ ನಿವಾಸಿ ನರಸಿಂಹ ಪೂಜಾರಿ ಎಂದು ಗುರುತಿಸಲಾಗಿದೆ. ತೆಕ್ಕಟ್ಟೆಯ ಗ್ರೇಸ್ ಆಡಿಟೋರಿಯಮ್ ಹಾಲ್ನಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮನೆಗೆ ಬರಲು ರಸ್ತೆ ದಾಟಲು ನಿಂತಿದ್ದ ನರಸಿಂಹ ಪೂಜಾರಿಗೆ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಮಿನಿ ಟೆಂಪೋ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story