ರೈಲಿಗೆ ತಲೆಕೊಟ್ಟು ಮಹಿಳೆ ಆತ್ಮಹತ್ಯೆ
ಕೋಟ, ಅ.10: ಅನಾರೋಗ್ಯದಿಂದ ಮಾನಸಿಕವಾಗಿ ನೊಂದ ಮಹಿಳೆ ಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.10ರಂದು ನಸುಕಿನ ವೇಳೆ 2.30ರ ಸುಮಾರಿಗೆ ಕೆದೂರಿನಲ್ಲಿ ನಡೆದಿದೆ.
ಮೃತರನ್ನು ಕೆದೂರು ಶಾಲೆ ಸಮೀಪದ ನಿವಾಸಿ ಗಿರಿಜಮ್ಮ ಶೆಟ್ಟಿ(72) ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ಹೊರಗೆ ಬಂದವರು ಕೆದೂರಿನ ರೈಲ್ವೆ ಹಳಿಯಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತದೇಹ ಸಂಪೂರ್ಣ ಛಿದ್ರಗೊಂಡಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story