ಅ. 19, 20ಕ್ಕೆ ಬ್ರಹ್ಮಾವರದಲ್ಲಿ ಕೃಷಿ ಮೇಳ
ಉಡುಪಿ, ಅ.15: ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಬ್ರಹ್ಮಾವರ ಮತ್ತು ಉಳ್ಳಾಲ, ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ಡಿಪ್ಲೋಮ ಕೃಷಿ ಮಹಾವಿದ್ಯಾಲಯ ಬ್ರಹ್ಮಾವರ, ಗೇರು ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ ಕೊಚ್ಚಿನ್, ಕೃಷಿ ಇಲಾಖೆ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶು ಸಂಗೋಪನೆ ಮತ್ತು ಮೀನುಗಾರಿಕಾ ಇಲಾಖೆ ಉಡುಪಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ, ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ಜಿಲ್ಲಾ ಕೃಷಿಕ ಸಮಾಜ ಉಡುಪಿ ಮತ್ತು ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಮೇಳವು ಅ.19 ಮತ್ತು 20ರಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Next Story