ಕಾಸರಗೋಡು : ಅಡ್ಕತ್ತಬೈಲ್ ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ
ಶಾಲೆಗೆ ರಜೆ
ಕಾಸರಗೋಡು : ರಾಷ್ಟೀಯ ಹೆದ್ದಾರಿಯ ಅಡ್ಕತ್ತಬೈಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪರಿಸರವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಸೋರಿಕೆ ತಡೆಯಲು ಪ್ರಯತ್ನಿಸುತ್ತಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಕಾಸರಗೋಡು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.
ವಾಹನಗಳು ಬದಲಿ ರಸ್ತೆಯಾಗಿ ಸಂಚರಿಸುತ್ತಿವೆ . ಮಂಗಳೂರಿನಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದಿದೆ.
ಗ್ಯಾಸ್ ಟ್ಯಾಂಕರ್ ಅಪಘಾತದ ಹಿನ್ನೆಲೆಯಲ್ಲಿ ಅಡ್ಕತ್ತಬೈಲ್ ಶಾಲೆಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ