ನೀಟ್, ಜೆಇಇ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ
ಮಂಗಳೂರು, ಅ.17: ಪ್ರಸಕ್ತ 2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ನೀಟ್ ಹಾಗೂ ಜೆಇಇ (ಅಡ್ವಾನ್ಸ್ಡ್ ಮೈನ್ಸ್) ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅ.25 ಕೊನೆಯ ದಿನವಾಗಿದೆ.
ತರಬೇತಿಯನ್ನು ಬೆಂಗಳೂರು ನಗರ, ಬೆಳಗಾವಿ, ಕಲಬುರ್ಗಿ, ಮೈಸೂರು, ಮಂಗಳೂರು ಮತ್ತು ಧಾರವಾಡ ಜಿಲ್ಲಾ ಕೇಂದ್ರಗಳಲ್ಲಿ ನೀಡಲು ಉದ್ದೇಶಿಸಿದೆ. ಜಿಲ್ಲಾ ಕೇಂದ್ರಗಳಲ್ಲಿ ಪ್ರಥಮ ಪಿ.ಯು.ಸಿ/10+1 ವ್ಯಾಸಂಗ ಮಾಡುತ್ತಿರುವ (ವಿಜ್ಞಾನ ವಿಭಾಗ) ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ಸೈಟ್ www.backwardclasses.kar.nic.in ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆ ತಿಳಿಸಿದೆ.
Next Story