ಅ.18ರಂದು ಸಿದ್ದರಾಮಯ್ಯ ದ.ಕ., ಕಾಸರಗೋಡು ಪ್ರವಾಸ
ಮಂಗಳೂರು, ಅ.17: ರಾಜ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅ.18ರಂದು ದ.ಕ., ಕೇರಳದ ಮಂಜೇಶ್ವರ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 7:40ಕ್ಕೆ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಬೆಳಗ್ಗೆ 8:40ಕ್ಕೆ ಮಂಗಳೂರು ವಿಮಾನ ನಿಲ್ದಾಣದ ತಲುಪಲಿದ್ದಾರೆ. ಬೆಳಗ್ಗೆ 9:30ಕ್ಕೆ ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಜಿಲ್ಲಾ ಮುಖಂಡರ ಸಭೆ ನಡೆಸಲಿದ್ದಾರೆ.
ಬೆಳಗ್ಗೆ 10:30ಕ್ಕೆ ಬಂಟ್ವಾಳದ ದಿ.ಕದ್ರಿ ಗೋಪಾಲನಾಥ್ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ನಗರದ ಸಂತ ಸೆಬಾಸ್ಟಿಯನ್ ಸಭಾಂಗಣದಲ್ಲಿ ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2:30ಕ್ಕೆ ಮಂಗಳೂರಿನಿಂದ ಮಂಜೇಶ್ವರ, ಕಾಸರಗೋಡು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುವ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಪಯವಳಿಕೆ, ಸಂಜೆ 5:30ಕ್ಕೆ ಮಜರ್ಪಲ್ಲ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ರಾತ್ರಿ 8 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರಿಗೆ ವಾಪಸಾಗಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.