ಕೊರಗ ಸಮುದಾಯಕ್ಕೆ ವಸತಿ ಸೌಲಭ್ಯ; ಅರ್ಜಿ ಆಹ್ವಾನ
ಉಡುಪಿ, ಅ.19: ಜಿಲ್ಲೆಯ ಮೂಲನಿವಾಸಿಗಳಾದ ಕೊರಗ ಜನಾಂಗದವ ರಿಂದ 3.50 ಲಕ್ಷ ರೂ. ಘಟಕ ವೆಚ್ಚದಲ್ಲಿ ವಸತಿ ಸೌಲಭ್ಯ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ ಇಲ್ಲಿ ಅಥವಾ ಸಂಬಂಧಪಟ್ಟ ಗ್ರಾಪಂಗಳಲ್ಲಿ ಪಡೆಯಹುದಾಗಿದೆ. ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಐಟಿಡಿಪಿ, ಉಡುಪಿ ಕಚೇರಿ, (ದೂರವಾಣಿ ಸಂಖ್ಯೆ: 0820-2574814)ಯನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story