ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆ: ರಾಜಕೀಯ ಪಕ್ಷಗಳ ಕಟೌಟ್ ತೆರವಿಗೆ ಸೂಚನೆ
ಮಂಗಳೂರು, ಅ.20: ಮಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ಘೋಷಣೆಯಾಗಿದ್ದು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ.
ನಗರದ ಎಲ್ಲ ವಾರ್ಡ್ಗಳಲ್ಲಿ ರಾಜಕೀಯ ಪಕ್ಷಗಳು, ರಾಜಕೀಯ ಮುಖಂಡರ ಚಿತ್ರವಿರುವ ಎಲ್ಲ ರೀತಿಯ ಕಟೌಟ್, ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಗಳನ್ನು ಸಂಬಂಧಪಟ್ಟವರು ತಕ್ಷಣದಿಂದಲೇ ತೆರವುಗೊಳಿಸಲು ಮಹಾನಗರ ಪಾಲಿಕೆ ಆಯುಕ್ತರು ಸೂಚಿಸಿದ್ದಾರೆ.
Next Story