ದೇರಳಕಟ್ಟೆ: ಅನಧಿಕೃತವಾಗಿ ಪಾರ್ಕಿಂಗ್ ಮಾಡಿದ್ದ ದ್ವಿಚಕ್ರ ವಾಹನಗಳ ಎತ್ತಂಗಡಿ
ಕೊಣಾಜೆ, ಅ.21: ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಯ ಮುಂಭಾಗದ ರಸ್ತೆಯಲ್ಲಿ ಸೋಮವಾರ ಅನಧಿಕೃತವಾಗಿ ಪಾರ್ಕಿಂಗ್ ಮಾಡಲಾಗಿದ್ದ ದ್ವಿಚಕ್ರ ವಾಹನಗಳನ್ನು ಟ್ರಾಫಿಕ್ ಪೊಲೀಸರು ಎತ್ತಂಗಡಿ ಮಾಡಿದ್ದಾರೆ.
ಯೆನೆಪೊಯ ಆಸ್ಪತ್ರೆಯ ಮುಖ್ಯ ದ್ವಾರದ ಸಮೀಪದ ರಸ್ತೆ ಬದಿಯಲ್ಲಿ ನೋ ಪಾರ್ಕಿಂಗ್ ಬೋರ್ಡ್ ಹಾಕಲಾಗಿದ್ದರೂ ಕೆಲವು ದ್ವಿಚಕ್ರ ವಾಹನ ಸವಾರರು ವಾಹನಗಳನ್ನು ಅದೇ ಸ್ಥಳದಲ್ಲಿ ನಿಲ್ಲಿಸಿ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10:30ರ ಸುಮಾರಿಗೆ ನಿಯಮ ಉಲಂಘಿಸಿ ಅನಧಿಕೃತವಾಗಿ ಪಾರ್ಕಿಂಗ್ ಮಾಡಲಾಗಿದ್ದ ವಾಹನಗಳನ್ನು ಟ್ರಾಫಿಕ್ ಪೊಲೀಸರು ಟೋಯಿಂಗ್ ಯಂತ್ರ ಬಳಸಿ ಕೊಂಡೊಯ್ದರು.
Next Story