ಕಾಸರಗೋಡು : ಬಸ್ ಢಿಕ್ಕಿ ; ಮಹಿಳೆ ಮೃತ್ಯು
ಕಾಸರಗೋಡು : ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಕಾಸರಗೋಡು ನಗರದಲ್ಲಿ ನಡೆದಿದೆ.
ನಗರದ ಬ್ಯಾಂಕ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಮೃತ ಮಹಿಳೆ 60 ವರ್ಷ ಪ್ರಾಯ ಅಂದಾಜಿಸಲಾಗಿದ್ದು , ಗುರುತು ಪತ್ತೆಯಾಗಿಲ್ಲ . ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ಸು ಬಡಿದಿದ್ದು, ರಸ್ತೆಗೆ ಬಿದ್ದ ಮಹಿಳೆಯ ದೇಹದ ಮೇಲೆ ಬಸ್ ಹರಿದಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story