ಬೆಳ್ತಂಗಡಿ: ಬಾಲಕಿಯ ಅತ್ಯಾಚಾರಕ್ಕೆ ಯತ್ನ; ಆರೋಪಿ ಸೆರೆ
ಬೆಳ್ತಂಗಡಿ: ತಾಲೂಕಿನ ರೆಖ್ಯಾ ಗ್ರಾಮದಲ್ಲಿ ಬಾಲಕಿಯ ಮಾನಭಂಕ್ಕೆ ಯತ್ನಿಸಿದ ಆರೋಪದ ಮೇಲೆ ಅಮೃತ್ (26) ಎಂಬಾತನನ್ನು ಪೋಸ್ಕೋ ಕಾಯಿದೆಯಡಿ ಪ್ರಕರಣ ದಾಖಲಿಸಿ, ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಅಮೃತ್ ನ.5ರಂದು ರಾತ್ರಿ ರೆಖ್ಯಾ ಗ್ರಾಮದ ಬಾಲಕಿಯೋರ್ವಳನ್ನು ಪುಸಲಾಯಿಸಿ ಆಕೆಯ ಮನೆಯ ಸಮೀಪದ ಗುಡ್ಡಕ್ಕೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ಆಕೆಯ ಹೆತ್ತವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಯ ಮೇಲೆ ಪೋಸ್ಕೋ ಕಾಯಿದೆಯಡಿ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯ ಪಿಎಸೈ ಅವಿನಾಶ್ ಅವರು ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Next Story