ಬೈಕ್ ಪಲ್ಟಿ: ಸವಾರ ಮೃತ್ಯು
ಕಾರ್ಕಳ, ನ.11: ಬೆಳ್ಮಣ್ ಗ್ರಾಮದ ಜಂತ್ರ ಸಾಸ್ತಾವು ದೇವಸ್ಥಾನದ ದ್ವಾರದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ನ.11 ರಂದು ಬೆಳಗ್ಗೆ 8.15ರ ಸುಮಾರಿಗೆ ನಡೆದಿದೆ.
ಮೃತರನ್ನು ಬೈಕ್ ಸವಾರ ನಿತೇಶ್ ಮೂಲ್ಯ(27) ಎಂದು ಗುರುತಿಸಲಾಗಿದೆ. ಸೂಡ ಕಡೆಯಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದ ಬೈಕ್, ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಸ್ಕಿಡ್ ಆಗಿ ಬಿತ್ತೆನ್ನಲಾಗಿದೆ. ಇದರಿಂದ ರಸ್ತೆ ಬಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story