ವಿಟ್ಲ ಹೊರೈಝನ್ ಸ್ಕೂಲ್ನಲ್ಲಿ ಮಕ್ಕಳ ದಿನಾಚರಣೆ
ವಿಟ್ಲ, ನ. 14: ವಿಟ್ಲ ಹೊರೈಝನ್ ಆಂಗ್ಲ ಮಾಧ್ಯಮ ಸ್ಕೂಲ್ನಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಆಟೋಟ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಸಂಚಾಲಕ ಅಬೂಬಕರ್ ನೋಟರಿ ಶುಭ ಹಾರೈಸಿದರು. ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಕಾರ್ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಜೊತೆ ಕಾರ್ಯದರ್ಶಿ ಹನೀಫ್, ಟ್ರಸ್ಟಿ ಸಿದ್ದೀಕ್ ಮಾಲಮೂಲೆ, ವ್ಯವಸ್ಥಾಪಕ ವಿಕೆಎಂ ಅಶ್ರಫ್, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ, ಮುಖ್ಯಶಿಕ್ಷಕಿ ವಿಲಾಸಿನಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
Next Story