ಬಜ್ಪೆ : ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು
ಬಜ್ಪೆ : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಅಂಚಿನ ಹೊಂಡಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ಎಕ್ಕಾರಿನಲ್ಲಿ ನಡೆದಿದೆ.
ಕಾರು ಕಟೀಲು ಕಡೆಯಿಂದ ಬಜ್ಪೆ ಕಡೆಗೆ ತೆರಳುತ್ತಿತ್ತು. ಕಾರು ಎಕ್ಕಾರು ಸಮೀಪ ಬರುತ್ತಿದ್ದಂತೆ ಎದುರಿನಿಂದ ಬರುವ ವಾಹನವೊಂದಕ್ಕೆ ಸೈಡ್ ಕೊಡುವ ಸಂದರ್ಭ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಅಂಚಿನ ಹೊಂಡಕ್ಕೆ ಬಿದ್ದಿದೆ.
ಘಟನೆಯಲ್ಲಿ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಈ ರಸ್ತೆಯ ಅಂಚುಗಳು ಕುಸಿದಿದ್ದು, ಬಹಳಷ್ಟು ಅಪಾಯಕಾರಿ ಸ್ಥಿತಿಯಲ್ಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Next Story