ಗಂಗೊಳ್ಳಿ ನಿವಾಸಿ ಸೌದಿ ಅರೇಬಿಯಾದಲ್ಲಿ ನಿಧನ
ಗಂಗೊಳ್ಳಿ, ನ.21: ಗಂಗೊಳ್ಳಿ ಜಾಮಿಯಾ ಮೊಹಲ್ಲಾ ವಾಟರ್ ಟ್ಯಾಂಕ್ ಎದುರಿನ ನಿವಾಸಿ ದಿ. ಯಾಕೂಬ್ ಸಾಹೇಬ್ ಹಾಜಿ ಅವರ ಪುತ್ರ ಇರ್ಷಾದ್ ಸಾಹೇಬ್ (52) ಎಂಬವರು ನ.19ರಂದು ಸೌದಿ ಅರೇಬಿಯಾ ದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಸುಮಾರು 20 ವರ್ಷಗಳಿಂದ ಸೌದಿ ಅರೆಬಿಯಾದಲ್ಲಿ ಕೆಲಸ ಮಾಡುತ್ತಿರುವ ಇವರು, ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದು ಸೌದಿಗೆ ತೆರಳಿದ್ದರು. ತನ್ನ ವಿಶ್ರಾಂತಿ ಕೊಠಡಿಯಲ್ಲಿ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ, ಹಾಗೂ ಇಬ್ಬರು ಸಹೋದರರು, ನಾಲ್ವರು ಸಹೋದರಿ ಯರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Next Story