ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ
ಬಂಟ್ವಾಳ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೋಳಂತೂರು ನಿವಾಸಿ ರಹೀಂ (26) ಎಂಬಾತನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಗುರುವಾರ ಬೆಳಗ್ಗೆ ಶಾಲೆಗೆ ತೆರಳುತ್ತಿರುವ ಬಾಲಕಿ ಕಲ್ಲಡ್ಕದ ವಸತಿ ಸಂಕೀರ್ಣವೊಂದರ ಸಮೀಪ ನಿಂತಿದ್ದ ಸಂದರ್ಭ ಆರೋಪಿ ಕಿರುಕುಳ ನೀಡಿದ್ದಾನೆ ಎಂದು ದೂರಲಾಗಿದೆ. ಮಾಹಿತಿ ಪಡೆದ ಕೂಡಲೇ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾದರು.
ಬಂಟ್ವಾಳ ನಗರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯನ್ವಯ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್, ಪ್ರಭಾರ ಎಸ್ಸೈ ಜಯರಾಮ ರೈ ಮತ್ತಿತರರು ಕಾರ್ಯಾಚರಣೆ ನಡೆಸಿದ್ದರು.
Next Story