2020ರ ಹಜ್ಯಾತ್ರೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಮಂಗಳೂರು, ನ.21: 2020ನೇ ಸಾಲಿನ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.
ಹಜ್ ಫಾರ್ಮ್ನ್ನು hajcommittee.gov.in ಆನ್ಲೈನ್ ಮೂಲಕ ಭರ್ತಿ ಮಾಡಿ ಸಲ್ಲಿಸಬಹುದು. ಕೇಂದ್ರ ಹಜ್ ಸಮಿತಿಯ ನಿರ್ದೇಶನದಂತೆ ರಾಜ್ಯ ಹಜ್ ಸಮಿತಿಯ ಕಾರ್ಯ ನಿರ್ವಹಣಾಧಿಕಾರಿ ಸೂಚನೆಯ ಮೇರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಡಿ.5ರವರೆಗೆ ವಿಸ್ತರಿಸಲಾಗಿದೆ ಎಂದು ಮಂಗಳೂರು ಹಜ್ ನಿರ್ವಹಣಾ ಸಮಿತಿಯ ಅಧ್ಯಕ್ಷ ಹಾಜಿ ವೈ. ಮುಹಮ್ಮದ್ ಕುಂಞಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story