ಆಟೊ ರಿಕ್ಷಾಕ್ಕೆ ಖಾಸಗಿ ಬಸ್ ಢಿಕ್ಕಿ: ನಾಲ್ವರಿಗೆ ಗಾಯ
ಮಂಗಳೂರು, ನ. 22: ಕೊಣಾಜೆ ಗ್ರಾಮ ಪಂಚಾಯತ್ ಕಚೇರಿ ಬಳಿ ಶುಕ್ರವಾರ ಆಟೋ ರಿಕ್ಷಾವೊಂದಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಮಗುಚಿ ಬಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಮತ್ತು ಚಾಲಕ ಸಹಿತ ನಾಲ್ವರು ಗಾಯಗೊಂಡಿದ್ದಾರೆ.
ಸ್ಥಳೀಯ ನಿವಾಸಿಗಳಾದ ಖದೀಜಮ್ಮ (71), ನೆಬಿಸಾ (45), ಮುಮ್ತಾಝ್ (32) ಮತ್ತು ಚಾಲಕ ಅಮೀರ್ ಅಶ್ರ್ (37) ಗಾಯಗೊಂಡವರು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ರಿಕ್ಷಾ ಕೊಣಾಜೆಯಿಂದ ಮಂಜನಾಡಿಗೆ ಹೋಗುತ್ತಿತ್ತು.
ಈ ಕುರಿತು ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story