ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಬ್ರಹ್ಮಾವರ, ನ. 28: ಬ್ರಹ್ಮಾವರ ಸಿಟಿ ಸೆಂಟರ್ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನ.27ರಂದು ರಾತ್ರಿ 9:45ರ ಸುಮಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿ ಯಾಗಿದೆ.
ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸ್ವಿಪ್ಟ್ ಮಾರುತಿ ಕಾರು ರಸ್ತೆ ದಾಟಲು ನಿಂತಿದ್ದ ಸಂದೀಪ್ ಮೊಗವೀರಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story