ಡಿ.5: ಮಂಗಳೂರಿನ ಶಾಲೆಗಳಲ್ಲಿ ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮ
ಮಂಗಳೂರು, ಡಿ.4: ದ.ಕ. ಜಿಲ್ಲಾಡಳಿತ ಹಾಗೂ ಲಯನ್ಸ್ ಕ್ಲಬ್ ವೆಲೆನ್ಸಿಯಾ ವತಿಯಿಂದ ಡಿ.5 ರಂದು ಬೆಳಗ್ಗೆ 9 ಗಂಟೆಯಿಂದ 10 ಗಂಟೆಯ ವರೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಶಾಲಾ ಕಾಲೇಜುಗಳ ಸಹಕಾರದೊಂದಿಗೆ ಜಾಗತಿಕ ತಾಪಮಾನ ಜಾಗೃತಿ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಗ್ಗೆ 9 ಗಂಟೆಗೆ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯ್ದ ಶಾಲಾ ಕಾಲೇಜು ವಿದ್ಯಾರ್ಥಿಗಳ ಸಮ್ಮುಖದಲ್ಲಿ ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story