ಬಿಆರ್ಪಿ, ಸಿಆರ್ಪಿ, ಶಿಕ್ಷಣ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಡಿ.4: 2019-20ನೇ ಸಾಲಿನ ಸಮಗ್ರ ಶಿಕ್ಷಣ ಯೋಜನೆಯಡಿ ಜಿಲ್ಲೆಯಲ್ಲಿ ಬಿಆರ್ಪಿ, ಸಿಆರ್ಪಿ ಮತ್ತು ಶಿಕ್ಷಣ ಸಂಯೋಜಕರ ಖಾಲಿ ಹುದ್ದೆ ಗಳನ್ನು ಲಿಖಿತ ಪರೀಕ್ಷೆ, ವಿದ್ಯಾರ್ಹತೆ ಹಾಗೂ ಸೇವಾನುಭವದ ಆಧಾರದ ಮೇಲೆ ಭರ್ತಿ ಮಾಡಲು ಆಸಕ್ತ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಂದ ಇಲಾಖಾ ಅಧಿಸೂಚನೆಯಂತೆ ಆನ್ಲೈನ್ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಡಿ.11ರಿಂದ 20ರವರೆಗೆ ಅವಕಾಶ ನೀಡಲಾಗಿದೆ ಎಂದು ಸಾ.ಶಿ.ಇಲಾಖೆಯ ಉಪನಿರ್ದೇಶಕರು ಹಾಗೂ ಪದನಿಮಿತ್ತ ಯೋಜನಾ ಸಮನ್ವಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story