ಡಿ.8ರಂದು ಮುಖ್ಯಮಂತ್ರಿ ದ.ಕ. ಜಿಲ್ಲೆ ಪ್ರವಾಸ
ಮಂಗಳೂರು, ಡಿ.6: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಡಿ.8ರಂದು ದ.ಕ. ಜಿಲ್ಲೆಗೆ ಆಗಮಿಸಲಿದ್ದಾರೆ.
ಡಿ.8ರಂದು ಮಧ್ಯಾಹ್ನ 1:45ಕ್ಕೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 2:25ಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಸಮಾರಂಭವನ್ನು ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನೇರವೇರಿಸಲಿದ್ದಾರೆ. ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story