ಡಿ.17 : ರಾಜ್ಯ ರೈತ ಸಂಘ -ಹಸಿರು ಸೇನೆಯಿಂದ ಹಕ್ಕೋತ್ತಾಯ ಜಾಥ
ಮಂಗಳೂರು, ಡಿ.10 : ದಕ್ಷಿಣ ಕನ್ನಡ ಜಿಲ್ಲೆಯ ರೈತರ ಹಕ್ಕೋತ್ತಾಯ ಜಾಥ ಡಿ.17ರಂದು ಬೆಳಗ್ಗೆ 11 ಗಂಟೆಗೆ ನಗರದ ಜ್ಯೋತಿ ಬಳಿಯ ಅಂಬೇಡ್ಕರ್ ವೃತ್ತ ದಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ವರೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ರೈತರ ಸಾಲ ಮನ್ನಾದ ಬಾಕಿ ಮೊತ್ತ ತಕ್ಷಣ ಬಿಡುಗಡೆ ಮಾಡಬೇಕು. ಅಡಿಕೆ ಬೆಳೆಗಾರರು ಹಳದಿ ಎಲೆ ರೋಗದಿಂದ ನಷ್ಟ ಅನುಭವಿಸಿರುವ ಹಿನ್ನೆಲೆಯಲ್ಲಿ ಪರಿಹಾರ ನೀಡಬೇಕು. ಜಿಲ್ಲೆಯಲ್ಲಿ ಮಂಕಿ ಪಾರ್ಕ್ ಮತ್ತು ನವಿಲು ಪಾರ್ಕ್ ನಿರ್ಮಾಣ ಮಾಡಿ ರೈತರ ಬೆಳೆ ರಕ್ಷಣೆ ಮಾಡಬೇಕು. ವಿಲೇವಾರಿಯಾಗದೆ ಉಳಿದಿರುವ 94ಸಿ,94ಸಿಸಿ ಅರ್ಜಿಗಳ ವಿಲೇವಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಋಣ ಮುಕ್ತ ಕಾಯಿದೆಯನ್ನು ಸಮರ್ಪಕವಾಗಿ ಜಾರಿಗೆ ತರಬೇಕು. ಭತ್ತದ ಬೆಳೆಗೆ ವಿಶೇಷ ಪ್ಯಾಕೇಜ್ ನೀಡಬೇಕು. ರಬ್ಬರ್ ಬೆಳೆಗಾರರಿಗೆ ಬೆಂಬಲ ಬೆಲೆ ನೀಡಬೇಕು, ಮೂಡಬಿದಿರೆಯ ಯುಜಿಡಿ ಕಾಮಗಾರಿಯನ್ನು ತಕ್ಷಣ ಅನುಷ್ಠಾನಗೊಳಿಸಬೇಕು ಮೊದಲಾದ ಬೇಡಿಕೆಗಳೊಂದಿಗೆ ಹಸಿರು ಸೇನೆ ಮತ್ತು ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಜಾಥ ಪ್ರತಿಭಟನಾ ಪ್ರದರ್ಶನ, ಹಕ್ಕೊತ್ತಾಯ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿಗೊಷ್ಠಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್, ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ,ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಸುಧಾಕರ ಜೈನ್ ಕೊಕ್ರಾಡಿ ಮೊದಲಾದವರು ಉಪಸ್ಥಿತರಿದ್ದರು.