ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಉಡುಪಿ, ಡಿ.11: ರಸ್ತೆ ದಾಟುತಿದ್ದ ಪಾದಚಾರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಚಲಾಯಿಸುತಿದ್ದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಮೃತರನ್ನು ದಾರಾ (50) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ 7 ಗಂಟೆಗೆ ಅಲೆವೂರು ಸಮೀಪದ ಸ್ವಾತಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ಮಣಿಪಾಲ ಕಡೆಯಿಂದ ಬಂದಿದ್ದ ಕಾರು ಚಾಲಕ ಢಿಕ್ಕಿ ಹೊಡೆದು ಕಾರು ನಿಲ್ಲಿಸದೇ ಪರಾರಿಯಾಗಿದೆ.
ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಪರಿಣಾಮ ತಲೆ ಹಾಗೂ ಮುಖಕ್ಕೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ದಾರಾ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story