ಉಡುಪಿ: ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಡಿ.12: ಉಡುಪಿ ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತೆರವಾಗಿರುವ 7 ವೈದ್ಯಾಧಿಕಾರಿ ಹುದ್ದೆಗೆ ಎಂಬಿಬಿಎಸ್ ವಿದ್ಯಾರ್ಹತೆಯ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿಯವರನ್ನು ಗುತ್ತಿಗೆ ಆಧಾರದ ಮೇರೆಗೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ ಆಗುವವರೆಗೆ/ಖಾಯಂ ವೈದ್ಯರು ವರ್ಗಾವಣೆಯಿಂದ ಹುದ್ದೆ ಭರ್ತಿಯಾದಲ್ಲಿ ನೇಮಕಾತಿ ಮಾಡಲು ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿದ ವೈದ್ಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ, ಅಜ್ಜರಕಾಡು, ಉಡುಪಿ ಜಿಲ್ಲಾ ಆಸ್ಪತ್ರೆ ಆವರಣ, ಉಡುಪಿ ಇಲ್ಲಿಂದ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಡಿ.24 ಕೊನೆಯ ದಿನ. ಸಂದರ್ಶನ ದಿನಾಂಕದಂದು ಖಾಲಿ ಇರುವ ಹುದ್ದೆಗಳಿಗೆ ಮಾತ್ರ ನೇಮಕಾತಿ ವಾಡಲಾಗುವುದು. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ(ದೂ.ಸಂಖ್ಯೆ: 0820-2536650)ಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.