ಕೆಎಸ್ಸಾರ್ಟಿಸಿ ಬಸ್ - ದ್ವಿಚಕ್ರ ವಾಹನದ ನಡುವೆ ಢಿಕ್ಕಿ: ಮಹಿಳೆ ಮೃತ್ಯು
ಕಡಬ, ಡಿ.26. ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಕಡಬದ ಹಳೇ ಸ್ಟೇಷನ್ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ಮೃತರನ್ನು ನೂಜಿಬಾಳ್ತಿಲ ಗ್ರಾಮದ ಪಳೆಯಮಜಲು ನಿವಾಸಿ ಜೂಲಿ ತೋಮಸ್ ಎಂದು ಗುರುತಿಸಲಾಗಿದೆ. ಮೃತರು ಕಡಬದಲ್ಲಿ ನಡೆಯುತ್ತಿದ್ದ ಸಂಯುಕ್ತ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಲೆಂದು ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಹಳೇ ಸ್ಟೇಷನ್ ಸಮೀಪ ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಕಡಬ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story