ಬಜಾಲ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ
ಮಂಗಳೂರು, ಜ.1: ನಗರದ ಬಜಾಲ್ ಗ್ರಾಮದ ಜಲ್ಲಿಗುಡ್ಡೆಯ ಜಯನಗರದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ಜಯನಗರದ ಶೇಖರನ್ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ.
ರಾತ್ರಿ 7:30ರ ಸಮಯದಲ್ಲಿ ಆಟೊರಿಕ್ಷಾಕ್ಕೆ ಬಳಸುವ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಅವಘಡ ಸಂಭವಿಸಿದ್ದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ವಿಷಯ ತಿಳಿದ ತಕ್ಷಣವೇ ಧಾವಿಸಿದ ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿತು.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Next Story