ಸ್ವಚ್ಛ ಭಾರತಕ್ಕೆ ಮಾದರಿಯಾದ ಆಳ್ವಾಸ್ ಶಿಕ್ಷಣ ಸಂಸ್ಥೆ
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಆಶ್ರಯದಲ್ಲಿ 80 ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಷಿಪ್ ನಡೆಯುತ್ತಿದ್ದು, ಇದರ ಅಂಗವಾಗಿ ನಡೆದ ಸಾವಿರಾರು ಮಂದಿ ಪಾಲ್ಗೊಂಡ ಆಕರ್ಷಕ ಮೆರವಣಿಗೆಯ ನಂತರ ರಸ್ತೆ ಬದಿಯಲ್ಲಿ ಬಿದ್ದಿದ್ದ ಕಸ, ತ್ಯಾಜ್ಯವನ್ನು ಹೆಕ್ಕಿ ಆಳ್ವಾಸ್ ಸಂಸ್ಥೆಯ ಸಿಬ್ಬಂದಿ ಟ್ರ್ಯಾಕ್ಟರ್ ಗೆ ಹಾಕಿ ಸಾಗಿಸುತ್ತಿದ್ದ ದೃಶ್ಯ ಕಂಡು ಬಂತು.
ಆಳ್ವಾಸ್ ಸಂಸ್ಥೆಯ ಸ್ವಚ್ಛತೆಯ ಬಗೆಗಿನ ಕಾಳಜಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.