ಕಡಬ: ಬಾಲಕಿಗೆ ಲೈಂಗಿಕ ಕಿರುಕಳ ; ಆರೋಪಿ ಸೆರೆ
ಕಡಬ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ತಡೆದು ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದೋಳ್ಪಾಡಿ ಗ್ರಾಮದ ಕಳೆಂಜೋಡಿ ನಿವಾಸಿ ಲಿಂಗಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.
ಆರೋಪಿ ಕಡಬದ ಖಾಸಗಿ ಶಾಲೆಯೊಂದರ ಆರನೇ ತರಗತಿಯ ವಿದ್ಯಾರ್ಥಿನಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದನು. ಈ ಬಗ್ಗೆ ಬಾಲಕಿಯು ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
Next Story