ಭಟ್ಕಳ: ಜ.6ರಂದು ಅರಣ್ಯ ಹಕ್ಕು ಹೋರಾಟಗಾರರ ಸಭೆ
ಭಟ್ಕಳ: ಅರಣ್ಯ ಅತಿಕ್ರಮಣದಾರರ ಸಭೆಯನ್ನು ಜ.6ರಂದು ಬೆಳಗ್ಗೆ 10 ಗಂಟೆಗೆ ಸ್ಥಳೀಯ ಸತ್ಕಾರ ಹೊಟೇಲ್ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಅರಣ್ಯ ಅತಿಕ್ರಮಣದಾರರ ಮೇಲೆ ಆಗುತ್ತಿರುವ ದೌರ್ಜನ್ಯ ಮಂಜೂರಿ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ದಾಖ ಲಾತಿಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಗುವುದು. ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ಎ. ರವೀಂದ್ರ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವೇದಿಕೆ ಜಿಲ್ಲಾ ಸಂಚಾಲಕ ದೇವರಾಜ ಗೊಂಡ ತಿಳಿಸಿದ್ದಾರೆ.
Next Story