ಗಾಂಜಾ ಮಾರಾಟಕ್ಕೆ ಯತ್ನ : ಸೊತ್ತು ಸಹಿತ ಆರೋಪಿ ಸೆರೆ
ಬಂಟ್ವಾಳ, ಜ. 8: ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇರೆಗೆ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬಂಟ್ವಾಳ ಸಜೀಪನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಸಿದ್ದಿಕ್ (32) ಬಂಧಿತ ಆರೋಪಿಯಾಗಿದ್ದು, ಈತನಿಂದ 5 ಸಾವಿರ ರೂ. ಮೌಲ್ಯದ 350 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಅವರು ಸಿಬ್ಬಂದಿಯವರೊಂದಿಗೆ ಗಸ್ತಿನಲ್ಲಿರುವ ವೇಳೆ ವ್ಯಕ್ತಿಯೋರ್ವ ಬ್ಯಾಗ್ ಹಿಡಿದುಕೊಂಡು ಸಂಶಯಾಸ್ಪದವಾಗಿ ವರ್ತಿಸಿ, ಬಳಿಕ ಪೊಲೀಸರನ್ನು ಕಂಡು ಓಡಲು ಯತ್ನಸಿದ್ದ. ಈ ವೇಳೆ ಪೊಲೀಸರು ವಶಕ್ಕೆ ಪಡೆದು ಬ್ಯಾಗನ್ನು ಪರಿಶೀಲಿಸಿದಾಗ ಗಾಂಜಾ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story