ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು
ಕಾರ್ಕಳ, ಜ.16: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೆದಿಂಜೆ ಗ್ರಾಮದ ಅಂಗನವಾಡಿ ಬಳಿ ನಡೆದಿದೆ.
ಮೃತರನ್ನು ನಂದಳಿಕೆಯ ಫೆಲಿಕ್ಸ್ ಡಿಮೆಲ್ಲೊ(87) ಎಂದು ಗುರುತಿಸಲಾಗಿದೆ. ಜ.14ರಂದು ಸಂಜೆ 6ಗಂಟೆ ಸುಮಾರಿಗೆ ಕೆದಿಂಜೆ ಕಡೆಯಿಂದ ಕಾಂತಾವರ ಕಡೆಗೆ ಹೋಗುತ್ತಿದ್ದ ಬೈಕ್ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಫೆಲಿಕ್ಸ್ ಅವರಿಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು, ಜ.15ರಂದು ಮಧ್ಯಾಹ್ನ 12:15ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story