ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಕಾಪು, ಜ.17: ಕಾಪು ವಿದ್ಯಾನಿಕೇತನ ಶಾಲಾ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.16ರಂದು ಸಂಜೆ ವೇಳೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿ ಯಾಗಿದೆ.
ಮೃತರನ್ನು ಬಾಗಲಕೋಟೆ ಜಿಲ್ಲೆಯ ಹನುಮಂತ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು, ರಸ್ತೆ ಬದಿ ಯಲ್ಲಿ ನಿಂತಿದ್ದ ಹನುಮಂತ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story