ವಿದ್ಯಾರ್ಥಿ ವೇತನ: ಅರ್ಜಿ ಸಲ್ಲಿಸುವ ದಿನ ವಿಸ್ತರಣೆ
ಮಂಗಳೂರು, ಜ.18: 2019-20ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಎನ್ಎಸ್ಪಿ ಮೂಲಕ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್ಎಸ್ಪಿ)ದಲ್ಲಿಯೂ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ಜ.31ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ವೆಬ್ಸೈಟ್ ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಎಸ್ಎಸ್ಪಿ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭ ಎನ್ಎಸ್ಪಿಎಯಲ್ಲಿ ಪಡೆದ ಐಡಿ ನಂ. ಕಡ್ಡಾಯವಾಗಿದೆ. ಎನ್ಎಸ್ಪಿ ಮೂಲಕ ಅರ್ಜಿ ಸಲ್ಲಿಸಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ದಲ್ಲಿ ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಗೊಳ್ಳುವುದಿಲ್ಲ ಎಂದು ದ.ಕ.ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.
Next Story