ಕಾರು ಢಿಕ್ಕಿ: ವೃದ್ಧೆ ಮೃತ್ಯು
ಕಾಪು, ಜ.19: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಕಾಪು ಮಂದಾರ ಹೋಟೆಲ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜ.18ರಂದು ರಾತ್ರಿ 11.15ರ ಸುಮಾರಿಗೆ ನಡೆದಿದೆ.
ಮೃತರನ್ನು ದಾವಣಗೆರೆ ಭಾಷಾ ನಗರ ನಿವಾಸಿ ಮುಮ್ತಾಝ್ ಬಿ.(70) ಎಂದು ಗುರುತಿಸಲಾಗಿದೆ. ತನ್ನ ಮೊಮ್ಮಗನೊಂದಿಗೆ ರಸ್ತೆ ದಾಟಲು ನಿಂತಿದ್ದ ಇವರಿಗೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಮುಮ್ತಾಝ್ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ. ಅಪಘಾತ ನಡೆಸಿದ ಕಾರು ನಿಲ್ಲಿಸದೆ ಪರಾರಿಯಾಗಿದೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story