ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆ
ಮಂಗಳೂರು: ಬಜ್ಪೆಯ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ಗೊಂದು ಸೋಮವಾರ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ನಿಲ್ದಾಣದಲ್ಲಿ ಸಿಕ್ಲಿರುವ ಬ್ಯಾಗ್ನ ಮಾಲಕರು ಯಾರೆಂದು ತಿಳಿದುಬಂದಿಲ್ಲ. ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಬ್ಯಾಗ್ನ್ನು ವಶಕ್ಕೆ ಪಡೆದು, ತಪಾಸಣೆ ನಡೆಸುತ್ತಿದ್ದಾರೆ.
ತಪಾಸಣಾ ಪ್ರಕ್ರಿಯೆ ನಡೆಯುತ್ತಿದೆ. ಬ್ಯಾಗ್ ಯಾರಿಗೆ ಸಂಬಂಧಿಸಿದ್ದು ಎನ್ನುವುದರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.