ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಜ.20: ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಾಲ್ಕು ಶಿಶು ಅಭಿವೃದ್ಧಿ ಯೋಜನೆ ಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 6 ಅಂಗನವಾಡಿ ಕಾರ್ಯಕರ್ತೆ ಮತ್ತು 39 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿ ಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸೆಸೆಲ್ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಟ 4ನೇ ತರಗತಿ ತೇರ್ಗಡೆಯಾ ಗಿರಬೇಕು. ಬ್ರಹ್ಮಾವರ ಯೋಜನೆಯ ಕೋಟತಟ್ಟು ಗ್ರಾಮದ ಆರಾಮ ದೇವಸ್ಥಾನ ಅಂಗನವಾಡಿ ಸಹಾಯಕಿಯ ಹುದ್ದೆಗೆ ಅರ್ಜಿ ಸಲ್ಲಿಸುವ ಅ್ಯರ್ಥಿ ಗಳು ಮಾತ್ರ ಕನ್ನಡಭಾಷೆಯೊಂದಿಗೆ ಅಯಾ ಅಲ್ಪಸಂಖ್ಯಾತ ಸಮುದಾಯದ ಭಾಷೆ ಬಲ್ಲವರಾಗಿರಬೇಕು.
ವೆಬ್ಸೈಟ್: http://udupi.nic.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಫೆ.5 ಕೊನೆಯ ದಿನ. ಹೆಚ್ಚಿನ ವಿವರ ಗಳಿಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಉಡುಪಿ ದೂ.ಸಂಖ್ಯೆ:0820-2524055, ಬ್ರಹ್ಮಾವರದೂ.ಸಂಖ್ಯೆ: 0820-2562244, ಕುಂದಾಪುರ ದೂ.ಸಂಖ್ಯೆ: 08254-230807, ಕಾರ್ಕಳ ದೂ.ಸಂಖ್ಯೆ: 08258-230992 ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದೇಶಕರ ಪ್ರಕಟಣೆ ತಿಳಿಸಿದೆ.