ಜ.25ರಂದು ಅಲೋಶಿಯಸ್ ಕಾಲೇಜಿನಲ್ಲಿ ಉದ್ಯೋಗ ಮೇಳ
ಮಂಗಳೂರು, ಜ. 23: ಸಂತ ಅಲೋಶಿಯಸ್ ಕಾಲೇಜು ಮಂಗಳೂರು ವತಿಯಿಂದ ಫ್ರೆಶರ್ವರ್ಲ್ಡ್ ಡಾಟ್ ಕಾಮ್ ಸಹಯೋಗದೊಂದಿಗೆ ಜ.25ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರದ ಅಲೋಶಿಯಸ್ ಕಾಲೇಜಿನಲ್ಲಿ ಮಹಾ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ವಂ. ಡಾ. ಪ್ರವೀಣ್ ಮಾರ್ಟಿಸ್ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ಬಿ.ಎ., ಬಿ.ಎಸ್ಸಿ, ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ. ಮತ್ತು ಸ್ನಾತಕೋತ್ತರ ಪದವಿ ತರಗತಿಗಳ ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಬಹುದು. ಸ್ಟಾವೇರ್ ಕಂಪೆನಿಗಳು, ಬ್ಯಾಂಕ್ಗಳು, ಸರಕು ನಿರ್ವಹಣೆ, ಸೇವಾಲಯಗಳು, ಅಟೋಮೊಬೈಲ್ ಕಂಪೆನಿ ಸೇರಿದಂತೆ ಸುಮಾರು 40ಕ್ಕೂ ಮಿಕ್ಕಿ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
ಹಲವಾರು ವಿದ್ಯಾರ್ಥಿಗಳು ಈಗಾಗಲೇ ಆನ್ಲೈನ್ ಮುಖೇನ ನೋಂದಣಿ ಮಾಡಿಕೊಂಡಿದ್ದು, ಉದ್ಯೋಗ ಮೇಳದ ದಿನ ಸ್ಥಳದಲ್ಲಿಯೇ ನೋಂದಣಿಗೆ ಅವಕಾಶವಿದೆ. ನೋಂದಣಿ ಉಚಿತವಾಗಿದ್ದು, ಮೇಳದಲ್ಲಿ ಒಟ್ಟಾರೆ ಸುಮಾರು 5,000 ಮಂದಿ ಉದ್ಯೋಗಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ಲೇಸ್ಮೆಂಟ್ ಆಫೀಸರ್ ಕವಿತಾ ವಿ.ವಿ., ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಚಂದ್ರಕಲಾ, ಆಯೋಜಕರಾದ ಡಾ. ರಿಚರ್ಡ್ ಗೊನ್ಸಾಲ್ವಿಸ್ ಇದ್ದರು.